ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿಯವರನ್ನು ವಯೋಸಹಜ ಅನಾರೋಗ್ಯದಿಂದ ಇಂದು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 97 ವರ್ಷದ ಅಡ್ವಾಣಿ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಇಂದು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.