ಎಸ್‌ಎಸ್‌ಎಲ್ ಸಿ, ಪ್ಲಸ್‌ಟು ಪರೀಕ್ಷೆಗಳಲ್ಲಿ  ಚಿನ್ಮಯ ವಿದ್ಯಾಲಯಕ್ಕೆ 100 ಶೇ. ಫಲಿತಾಂಶ

ಕಾಸರಗೋಡು: ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿಗಳು ಶೇ. 100 ಫಲಿತಾಂಶವನ್ನು ಪಡೆದು ಸಾಧನೆ ಮಾಡಿದ್ದಾರೆ. ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಪ್ರಾರ್ಥನಾ ಆರ್. ರಂಜೀವ್ 98.60% ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಹರ್ಷಿಣಿ ಹರಿಹರನ್ 98.00% ಪಡೆದು ದ್ವಿತೀಯ ಸ್ಥಾನ ಹಾಗೂ ಶದಾ ಶರೀಫ್ 97.80% ಪಡೆದು ತೃತೀಯ ಸ್ಥಾನ ಗಳಿಸಿದ್ದಾರೆ. 12ನೇ ತರಗತಿಯ ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗು 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 12ನೇ ತರಗತಿಯ ಪರೀಕ್ಷೆಯಲ್ಲಿ ಮಾಳವಿಕ ಎನ್. ಎಂ 96.80% ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಮೊಹಮ್ಮದ್ ತಲ್ಹ 95.80% ಪಡೆದು ದ್ವಿತೀಯ ಸ್ಥಾನ ಹಾಗೂ ಅಭಿನವ್. ಪಿ 93% ಪಡೆದು ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page