ಕಡಲ್ಕೊರೆತ: ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿಯಿಂದ ಸಚಿವರಿಗೆ ಮನವಿ
ಉಪ್ಪಳ: ಉಪ್ಪಳ, ಮಂಜೇಶ್ವರ ತೀರ ಪ್ರದೇಶದ ವಿವಿಧ ಕಡೆಗಳಲ್ಲಿ ಕಡಲ್ಕೊರೆತದಿಂದ ಉಂಟಾಗಿರುವ ಹಾನಿ ಹಾಗೂ ಸ್ಥಳೀಯರು ಅನುಭವಿಸುವ ಸಂಕಷ್ಟಗಳ ಬಗ್ಗೆ ವಿವರಿಸಿ ಮೀನುಗಾರಿಕೆ, ಬಂದರು ಸಚಿವ ಸಜಿ ಚೆರಿಯಾನ್‌ಗೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಮನವಿ ನೀಡಿದೆ. ಕಳೆದ ಹಲವು ದಿನಗಳಿಂದ ಈ ಪ್ರದೇಶದಲ್ಲಿ ಉಂಟಾಗುತ್ತಿರುವ ಕಡಲ್ಕೊರೆತ, ನಾಶನಷ್ಟಗಳ ಬಗ್ಗೆ ಪತ್ರಿಕೆಯಲ್ಲಿ ವರದಿ ಮಾಡಲಾಗುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಲು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಿಪಿಎಂ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಆರ್. ಜಯಾನಂದ ಮನವಿ ಪತ್ರವನ್ನು ಸಚಿವರಿಗೆ ಹಸ್ತಾಂತರಿಸಿದರು.