ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉಚಿತ ಪುಸ್ತಕ ವಿತರಣೆ 4ರಂದು

ಕುಂಬಳೆ: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರದ ವತಿಯಿಂದ ಜಿಲ್ಲೆಯ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ ಆ.4 ರಂದು ಬೆಳಿಗ್ಗೆ 10.ರಿಂದ ನಾರಾಯಣಮಂಗಲ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯ ಅತಿಥಿಯÁಗಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ ಕುಮಾರ್ ಕಲ್ಕೂರ ಉಪಸ್ಥಿತರಿರುವರು. ಪುತ್ತಿಗೆ ಪಂ. ಅಧ್ಯಕ್ಷ ಸುಬ್ಬಣ್ಣ ಆಳ್ವ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ, ಮಂಜುನಾಥ ಆಳ್ವ ಮಡ್ವ, ಕ.ಸಾ.ಪ.ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಸಹಿತ ಹಲವರು ಉಪಸ್ಥಿತರಿರುವರು.

You cannot copy contents of this page