ಕರ್ನಾಟಕ ಮದ್ಯ ವಶ: ಓರ್ವ ಸೆರೆ
ಕಾಸರಗೋಡು: ಚೆರ್ಕಳದಲ್ಲಿ ಕಾಸರಗೋಡು ಅಬಕಾರಿ ರೇಂಜ್ನ ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜೋಸೆಫ್ರ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕರ್ನಾಟಕ ನಿರ್ಮಿತ ೨.೮೮ ಲೀಟರ್ ಮದ್ಯ ವಶಪಡಿಸಿ ಕೊಂಡಿದೆ. ಈ ಸಂಬಂಧ ಕರ್ನಾಟಕ ಹಾವೇರಿ ನಿವಾಸಿ ಸಂತೋಷ್ (೨೭) ಎಂಬಾತನನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿ ಸಲಾಗಿದೆ. ಇನ್ನೋರ್ವ ವ್ಯಕ್ತಿ ಸಂತೋಷ್ನ ಮೂಲಕ ಮದ್ಯ ಮಾರಾಟ ನಡೆಸುತ್ತಿದ್ದನೆಂಬ ಮಾಹಿ ತಿಯೂ ಲಭಿಸಿದೆ ಎಂದು ಅಬ ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ಬಳಿಕ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.