ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು ತೆರವಿಗೆ ಕ್ರಮ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟೀಸ್ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

You cannot copy contents of this page