ಕಾರಿನಲ್ಲಿ ಸಾಗಿಸುತ್ತಿದ್ದ ತಂಬಾಕು ಉತ್ಪನ್ನ ವಶ: ಓರ್ವ ಸೆರೆ
ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಕಾರು ಚಲಾಯಿಸುತ್ತಿದ್ದ ಕಲ್ಲಿಕೋಟೆ ಕೊಲಾಂಡಿ ಚೆಮ್ಮಾರತ್ತೂರು ನಿವಾಸಿ ಅಬೂಬಕ್ಕರ್ (45) ಎಂಬಾತನನ್ನು ಕಾರು ಸಹಿತ ಬಂಧಿಸಲಾಗಿದೆ.
ತೃಕ್ಕನ್ನಾಡ್ ಪೆಟ್ರೋಲ್ ಬಂಕ್‌ನಲ್ಲಿ ಬೇಕಲ ಪೊಲೀಸ್ ಠಾಣೆ ಎಸ್.ಐ. ಅರುಣ್ ಮೋಹನ್‌ರ ನೇತೃತ್ವದ ಪೊಲೀಸರು ವಾಹನ ತಪಾಸಣೆಯಲ್ಲಿ ನಡೆಸುತ್ತಿದ್ದ ವೇಳೆ ಬಂದ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ನಿಲ್ಲಿಸದೆ ಪರಾರಿಯಾದ ಹಿನ್ನೆಲೆಯಲ್ಲಿ ಶಂಕೆ ಗೊಂಡ ಪೊಲೀಸರು ತಮ್ಮ ವಾಹನದಲ್ಲಿ ಕಾರನ್ನು ಹಿಂಬಾಲಿಸಿ ನಗರದ ಕರಂದಕ್ಕಾಡಿನಿಂದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆಗೊಳಪಡಿಸಿದಾಗ ನಾಲ್ಕು ಗೋಣಿ ಚೀಲಗಳಲ್ಲಿ ತುಂಬಿಸಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಸಂಬಂಧಿಸಿ ಅಬೂಬಕ್ಕರ್‌ನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದೆ.