ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಕಾಸರಗೋಡು: ಕಾರು ಢಿಕ್ಕಿ ಹೊಡೆದು ಪಾದಾಚಾರಿ ಸಾವನ್ನಪ್ಪಿದ ಘಟನೆ ನಿನ್ನೆ ಚೆರ್ಕಳಕ್ಕೆ ಸಮೀಪದ ಸಂತೋಷ್ ನಗರದಲ್ಲಿ ನಡೆದಿದೆ.
ಸಂತೋಷ್‌ನಗರದ ತಾಯ ಲಂಗಾಡಿ ವಿಲ್ಲಾದ ಮೊಹಮ್ಮದ್ ಎಂಬವರ ಮಗ ಅಬ್ದುಲ್ಲ (63) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಅಪರಾಹ್ನ ಸಂತೋಷ್‌ನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿದ ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ, ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಿದ್ಯಾನಗರ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.