ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕಾಲರಾ ಭೀತಿ ಎದುರಾಗಿದೆ. ಮೂಡಬಿದಿರೆ ನೆಲ್ಲಿಕಾರು ನಿವಾಸಿ ವ್ಯಕ್ತಿಯೋರ್ವರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ವೇಳೆ ಉಡುಪಿಯ ಹೋಟೆಲ್ ಒಂದರಿಂದ ಸಾಮೂಹಿಕವಾಗಿ ಸೋಂಕು ತಗಲಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.