ಕುಂಬಳೆ ಉಪಜಿಲ್ಲಾ ಶಾಲಾ ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನೆ
ನೀರ್ಚಾಲು: ಕುಂಬಳೆ ಉಪಜಿಲ್ಲಾ ಶಾಲಾ ಒಲಿಂಪಿಕ್ಸ್ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಎಲ್‌ಪಿ ಶಾಲೆಯಲ್ಲಿ ಆರಂಭವಾಯಿತು. ನಿನ್ನೆ ಬೆಳಿಗ್ಗೆ ಲೋಕಸಭಾ ಕ್ಷೇತ್ರದ ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಕ್ರೀಡಾಸ್ಪರ್ಧೆಗಳನ್ನು ಉದ್ಘಾಟಿಸಿದರು.
ಬದಿಯಡ್ಕ ಪಂಚಾಯತ್ ಅಧ್ಯಕ್ಷೆ ಶಾಂತಾ. ಬಿ ಅಧ್ಯಕ್ಷತೆ ವಹಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಜಿಲ್ಲಾ ಪಂಚಾಯತ್ ಸದಸ್ಯೆ ಶೈಲಜಾ ಭಟ್, ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಎಂ, ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಕಾಸರಗೋಡು ಬ್ಲೋಕ್ ಪಂಚಾಯತ್ ಸದಸ್ಯೆ ಜಯಂತಿ, ಬದಿಯಡ್ಕ ಪಂಚಾಯತ್ ಸದಸ್ಯೆ ಜಯಶ್ರೀ ಪಿ, ರಕ್ಷಕ-ಶಿಕ್ಷಕ ಸಂಘದ ಅಧಕ್ಷ ಸುಕುಮಾರ ಕುದ್ರೆಪ್ಪಾಡಿ, ಬದಿಯಡ್ಕ ಪಂಚಾಯತ್ ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಮಟ್ಟದ ವಿವಿಧ ಚಟುವಟಿಕೆಗಳ ಸಮಿತಿ ಸಂಚಾಲಕ ಸುರೇಂದ್ರನ್ ಎಂ.ವಿ, ಬದಿಯಡ್ಕ ಪಂಚಾಯತ್ ಸದಸ್ಯ ಶ್ಯಾಮ ಪ್ರಸಾದ್ ಮಾನ್ಯ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ, ಬದಿಯಡ್ಕ ಆರೋಗ್ಯ ಸೇವಾ ಕೇಂದ್ರದ ಹೆಲ್ತ್ ಇನ್‌ಸ್ಪೆಕ್ಟರ್ ರಾಜೇಶ್, ಮುಖ್ಯೋಪಾಧ್ಯಾಯಿನಿ ಮಾಲತಿ ವೈ, ಅಧ್ಯಕ್ಷ ವಿಜಯ ಕುಮಾರ್ ಪಿ, ಸಂತೋಷ್ ಪಿ.ಎಚ್. ಶುಭಕೋರಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಎಂ.ಕೆ ವಂದಿಸಿದರು. ನಾಳೆ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.