ಕುಂಬಳೆ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ೨೭ರಂದು
ಕುಂಬಳೆ: ಇತಿಹಾಸ ಪ್ರಸಿದ್ಧ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ ೧೬ರಿಂದ ೨೯ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಈ ತಿಂಗಳ ೨೭ರಂದು ಬೆಳಿಗ್ಗೆ ೯ ಗಂಟೆಗೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಬಿಡುಗಡೆಗೊಳಿಸುವರು. ಆ ಬಳಿಕ ನಡೆಯುವ ಸಭೆಯಲ್ಲಿ ಮಾಯಿಪ್ಪಾಡಿ ಅರಮನೆಯ ರಾಜೇಂದ್ರ ರಾವ್ ಮಾಯಿಪ್ಪಾಡಿ ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕ್ಷೇತ್ರದ ಪವಿತ್ರಪಾಣಿ, ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿರುವರು. ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಂಬಂಧಪಟ್ಟವರು ತಿಳಿಸಿದ್ದಾರೆ.