ಕುಂಬಳೆ ಭಾಸ್ಕರ ನಗರದಲ್ಲಿ ಕಾರು ಅಪಘಾತ
ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ಅಪಘಾತ ಸಂಭವಿಸಿದೆ. ನಿನ್ನೆ ರಾತ್ರಿ ಮುಳ್ಳೇರಿಯದಿಂದ ಕಟೀಲು ಭಾಗಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಂಚರಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ಕಾರು ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಕಟೀಲು ನಿವಾಸಿಗಳಾದ ಸತೀಶ ಹಾಗೂ ಅವರ ತಾಯಿ ಲೀಲ ಸಣ್ಣ ಪುಟ್ಟ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹಲವು ವಾಹನಗಳು ಅಪಘಾತ ಕ್ಕೀಡಾಗಿವೆ