ಕುಳೂರು ಶಾಲೆಯಲ್ಲಿ ಶತಾಬ್ದಿ ಸಂಭ್ರಮ: ಸದಾಶಿವ ರಂಗಮಂದಿರ ಉದ್ಘಾಟನೆ

ಮಂಜೇಶ್ವರ : ‘ತಾಯಿಗಿಂತ ಮಿಗಿಲಾದ ದೇವರಿಲ್ಲ, ಅಂತಹ ಮಹಾತಾಯಿಯ ಹೆಸರು ಚಿರಸ್ಥಾಯಿ ಯಾಗಿ ಉಳಿಯಲು ಅವರ ಹೆಸರಲ್ಲಿ ನಾನು ಮತ್ತು ನನ್ನ ಸಹೋದರ ಕೊಟ್ಟ ರಂಗಮAದಿರ ಹಾಗೂ ಸಭಾಂಗಣ ನೋಡಿ ಸಾರ್ಥಕವಾಯಿತು. ಶಾಲೆಯು ಹೀಗೆ ಉತ್ತರೋತ್ತರ ಅಭಿವೃದ್ಧಿಯನ್ನು ಕಾಣಲಿ’ ಎಂದು ಕೊಡುಗೈದಾನಿ ಕುಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ಹೇಳಿದರು.
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಾಬ್ದಿ ಸಂಭ್ರಮ ಕಾರ್ಯಕ್ರಮದಲ್ಲಿ ತಾವು ಕಲಿತ ಕುಳೂರು ಶಾಲೆಯ ಶತಮಾನೋತ್ಸವದ ಪ್ರಯುಕ್ತ ಕೊಡುಗೆಂiÀÆಗಿ ನೀಡಿದ ಸದಾಶಿವ ರಂಗಮAದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶತಮಾನೋತ್ಸವದ ಪ್ರಯುಕ್ತ ಕೊಡುಗೆ ನೀಡಿದ ರೂಫ್ ಶೀಟ್ ಹಾಗೂ ಇಂಟ ರ್ಲಾಕ್ ವ್ಯವಸ್ಥೆಯನ್ನೊಳ ಗೊಂಡ ಸಭಾಂಗಣವನ್ನು ಕುಳೂರು ಕನ್ಯಾನ ರಘುರಾಮ ಕೆ. ಶೆಟ್ಟಿ ಉದ್ಘಾಟಿಸಿದರು.
ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಕುಳೂರು ಬೀಡಿನ ದಾಸಣ್ಣ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು. ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಶತಮಾನೋತ್ಸವದ ಪ್ರಯುಕ್ತ ರಚನೆಯಾದ ‘ಅರಳು’ ಸ್ಮರಣ ಸಂಚಿಕೆಯನ್ನು ಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕೇರಳ ತುಳು ಅಕಾಡೆಮಿಯ ಅಧ್ಯಕ್ಷ ಕೆ.ಆರ್. ಜಯಾನಂದ, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಭಾಕರ್ ರೈ ನಡುಹಿತ್ಲು, ಶ್ರೀಧರ ಸೇನವ, ನಿವೃತ್ತ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಕೃಷ್ಣ ಮೂರ್ತಿ ಎಂ.ಎಸ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪಿ.ಬಿ, ಗುಬ್ಯ ಶ್ರೀಧರ ಶೆಟ್ಟಿ, ಮೋಹನ್ ಶೆಟ್ಟಿ ಮಜ್ಜಾರ್, ಐಲ ದೇವದಾಸ್ಥಾನದ ಮೊಕ್ತೇಸರ ನಾರಾಯಣ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಿದರು.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್, ವಾರ್ಡ್ ಪ್ರತಿನಿದಿs ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲೆಯ ಮಹಾಪೋಷಕ ಕುಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ, ಕುಳೂರು ಕನ್ಯಾನ ರಘುರಾಮ ಕೆ. ಶೆಟ್ಟಿ, ಮೋಹನ್ ಶೆಟ್ಟಿ ಮಜ್ಜಾರ್ ರವರನ್ನು ಗೌರವಿಸಲಾ ಯಿತು. ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಭಡ್ತಿ ಹೊಂದಿದ ದಿನೇಶ್ ವಿ, ಕುಳೂರು ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಕೃಷ್ಣಮೂರ್ತಿ ಎಂ.ಎಸ್. ರನ್ನು ಗೌರವಿಸಲಾಯಿತು. ಜೊತೆಗೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕರುಗಳಾದ ಮೊಹಮ್ಮದ್ ಪಿ, ಪೂವಣಿ ಪೂಜಾರಿ, ಸತ್ಯನಾರಾಯಣ ಶರ್ಮ ಪಿ ಹಾಗೂ ವಿನೋದ್ ಕುಮಾರ್ ಬಿ. ರವರನ್ನು ಗೌರವಿಸ ಲಾಯಿತು. ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಸಿ ಶೆಟ್ಟಿ ಚಾರ್ಲ ಸ್ವಾಗತಿಸಿ, ಶಿಕ್ಷಕ ಜಯ ಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಶತಮಾನೋತ್ಸವ ಸಮಿತಿ ಕಾರ್ಯ ದರ್ಶಿ ಜಯಪ್ರಕಾಶ್ ಶೆಟ್ಟಿ ಅಂಗಡಿ ದಾರ್ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳು, ಅಂಗನ ವಾಡಿ ಪುಟಾಣಿಗಳು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಹಳೆ ವಿದ್ಯಾರ್ಥಿ ಗಳು ಹಾಗೂ ಊರವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತÀÄ. ಫ್ರೆಂಡ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಕುಳೂರು ಇವರ ಪ್ರಾಯೋಜಕತ್ವದಲ್ಲಿ ರಿದಂ ಫೋಕ್ ಬ್ಯಾಂಡ್ ಮಡಿಕೈ ಇವರಿಂದ ಜÁನ ಪದ ಹಾಡು ಕುಟುಂಬಶ್ರೀ ಬಳಗ ಕುಳೂರು ಇವರ ಪ್ರಾಯೋಜಕತ್ವದಲ್ಲಿ ಶ್ರೀ ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಕುಕ್ಕಾಜೆ ಇವರಿಂದ ‘ಶಶಿಪ್ರಭ ಪರಿಣಯ’ ಮಹಿಳಾ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

You cannot copy content of this page