ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

ಕಾಸರಗೋಡು: ಕೆಲಸಕ್ಕೆಂದು ಮನೆಯಿಂದ ಹೋದ ಯುವತಿ ಬಳಿಕ ಹಿಂತಿರುಗದೆ ನಾಪತ್ತೆಯಾಗಿ ರುವುದಾಗಿ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ. ಕೂಡ್ಲು, ಚೌಕಿ ಮಜಲ್ ಹೌಸ್‌ನ ಭಾಸ್ಕರ ಎಂಬವರ ಪುತ್ರಿ ಶ್ರೇಯ (೨೧) ನಾಪತ್ತೆಯಾದ ಯುವತಿ. ಈ ಬಗ್ಗೆ ಆಕೆಯ ಮನೆಯವರು ನೀಡಿದ ದೂರಿನಂತೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯುವತಿ ಚೌಕಿಯಲ್ಲಿರುವ ಫ್ಯಾನ್ಸಿ ಅಂಗಡಿ ಯೊಂದಕ್ಕೆ ಜನವರಿ ೧ರಂದು ಕೆಲಸಕ್ಕೆ ಸೇರ್ಪಡೆಗೊಂಡಿದ್ದಳು. ನಿನ್ನೆ ಕೆಲಸಕ್ಕೆ ಹೋಗಿ ಬಳಿಕ ಬಳಿಕ ಮನೆಗೆ ಹಿಂತಿರುಗಿಲ್ಲವೆಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.

You cannot copy contents of this page