ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ಬೆಂಗಳೂರಿನಲ್ಲಿ ಸಿದ್ಧಾರ್ಥ ಪ್ರಶಸ್ತಿ ಪ್ರದಾನ
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ಮಾನ್ಯತೆ ಪಡೆದ ವಿಕೆಎಂ ಕಲಾವಿದರ ವತಿಯಿಂದ ನೀಡುವ ಸಿದ್ಧಾರ್ಥ ಪ್ರಶಸ್ತಿ ಕಾಸರಗೋಡಿನ ಧಾರ್ಮಿಕ, ಸಾಮಾಜಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ನಿನ್ನೆ ಪ್ರದಾನ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮಾರಕ ನಾಟಕೋತ್ಸವ ಮತ್ತು ಸಾಂಸ್ಕೃತಿಕ ಕಲಾ ಮೇಳದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆದಿದೆ. ಡಾ. ಎ. ರಾಧಾಕೃಷ್ಣ ರಾಜು, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ವಿಠಲ್ ಕೊಪ್ಪದ್, ಹಿರಿಯ ರಂಗಭೂಮಿ ಕಲಾವಿದೆ ಕಮನೀಧರನ್, ಹಿರಿಯ ರಂಗತಜ್ಞ ಕಣ್ಣಪ್ಪ ಜಿ. ಶ್ರೀನಿವಾಸ, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಆರ್. ಲಕ್ಷ್ಮೀದೇವಿ ಉಪಸ್ಥಿತರಿದ್ದರು.