ಕೊಂಡೆವೂರು ಆಶ್ರಮದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಚಂಡಿಕಾ ಯಾಗ ಫೆ. ೨೨ರಂದು

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ವೇದಮಾತೆ ಶ್ರೀ ಗಾಯತ್ರೀ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಚಂಡಿಕಾ ಯಾಗ ಫೆ.22ರಂದು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ಬ್ರಹ್ಮಶ್ರೀ ಕಮಲಾದೇವಿ ಪ್ರಸಾದ ಅಸ್ರಣ್ಣರವರ ಆಚಾರ್ಯತ್ವದಲ್ಲಿ ನಡೆಯಲಿದೆ.
ಪ್ರಾತಕಾಲ 7ರಿಂದ ಪ್ರಾರ್ಥನೆ, ಪುಣ್ಯಾಹ, ಗಣಯಾಗ, ಶ್ರೀ ಗಾಯತ್ರೀ ದೇವಿಗೆ ಪಂಚವಿAಶತಿ ಕಲಶಾಧಿವಾಸ, ಚಂಡಿಕಾ ಯÁಗ, 7.30ಕ್ಕೆ ಚಂಡಿಕಾ ಯಾಗ ಪ್ರಾರಂಭ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಅಪರಾಹ್ನ 2ರಿಂದ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿಧ್ಯಾಪೀಠದ ವಿದ್ಯಾರ್ಥಿಗಳಿಂದ ಮಹಿಷ ವಧೆ ಯಕ್ಷಗಾನ ಬಯಲಾಟ, ರಾತ್ರಿ 7.30ಕ್ಕೆ ರಾತ್ರಿ ಪೂಜೆ, ನಡೆಯಲಿದೆ.

You cannot copy contents of this page