ಕೊಳೆತು ದುರ್ವಾಸನೆ ಬೀರುತ್ತಿರುವ ಬೀದಿ ನಾಯಿ: ಸ್ಥಳೀಯರಿಗೆ ತೀವ್ರ ಸಮಸ್ಯೆ
ಉಪ್ಪಳ: ರಸ್ತೆಯಲ್ಲಿ ನಾಯಿ ಸತ್ತು ಕೊಳೆತು ದುರ್ವಾಸನೆ ಬೀರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಸಮಸ್ಯೆ ಸೃಷ್ಟಿಯಾಗಿದೆ. ಉಪ್ಪಳ ಭಗವತೀ ಗೇಟ್ ಸಮೀಪದ ಸರ್ವೀಸ್ ರಸ್ತೆಯಲ್ಲಿ ಒಂದು ವಾರದ ಹಿಂದೆ ಸತ್ತ ನಾಯಿಯ ಕಳೇಬರ ಈಗಲೂ ಅಲ್ಲಿದ್ದು, ಇದು ಕೊಳೆತು ದುರ್ವಾಸನೆ ಬೀರುತ್ತಿದೆ. ಇದರಿಂದ ವಾಹನ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಸಮಸ್ಯೆಯಾಗಿದೆ. ಈ ಪರಿಸರದಲ್ಲಿ ಕಳೆದ ಹಲವು ತಿಂಗಳುಗಳಿಂದ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ಠಿಕಾಣಿ ಹೂಡಿತ್ತು. ಇವುಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡುತ್ತಿರುವುದು ವಾಹನ ಅಪಘಾತಕ್ಕೂ ಕಾರಣವಾಗುತ್ತಿದೆ. ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನವನ್ನು ಬೆನ್ನಟ್ಟುವುದು ಕಂಡುಬರುತ್ತಿತ್ತು. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಉಂಟಾಗಬೇಕೆಂ ದು ಸ್ಥಳೀಯರು ಆಗ್ರಹಿಸಿದ್ದಾರೆ.