ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ವರ್ಕಾಡಿ: ಇಲ್ಲಿನ ತೌಡುಗೋಳಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಕೇಂದ್ರಕ್ಕೆ ಪೊಲೀಸರು  ದಾಳಿ ನಡೆಸಿ ಒಂದು ಕೋಳಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಮೊನ್ನೆ ಸಂಜೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದವರು ಓಡಿ ಪರಾರಿಯಾಗಿದ್ದಾರೆ.ಈ ಸಂಬಂಧ ಕಂಡರೆ ಪತ್ತೆಹಚ್ಚಬಹು ದಾದ ಇಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಕಟ್ಟಿ ಹಾಕಲಾಗಿದ್ದ ಕೋಳಿಯನ್ನು ಕಸ್ಟಡಿಗೆ ತೆಗೆದಿರುವು ದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page