ಕೋವಿಡ್ ಕೇಸು ಹೆಚ್ಚಳ: ಪ್ರಧಾನಿ ಭೇಟಿಯಾಗುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯ

ನವದೆಹಲಿ: ದೇಶದಲ್ಲಿ ಸಕ್ರಿಯ ಕೋವಿಡ್ -೧೯ ಪ್ರಕರಣಗಳು ಇಂದು 7000 ದಾಟಿರುವುದರಿಂದ ಪ್ರಧಾನ ಮಂತ್ರಿಯನ್ನು ಭೇಟಿಯಾಗುವ ಸಚಿವರೂ ಸೇರಿದಂತೆ ಎಲ್ಲರಿಗೂ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 306 ಹೊಸ ಕೋವಿಡ್ ಪ್ರಕರಣಗಳು ಮತ್ತು ೬ ಸಾವುಗಳು ನಡೆದಿದೆ ಎಂದು ತಿಳಿಸಲಾಗಿದೆ. ಇದರಲ್ಲಿ ಮೂರು ಸಾವು ಕೇರಳದಲ್ಲಿ ನಡೆದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಇದೇ ಅವದಿ ಯಲ್ಲಿ ತಲಾ 1ರಂತೆ ಸಾವು ಸಂಭವಿಸಿದೆ.

ಕೇರಳದಲ್ಲಿ ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 170 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಲಾಗಿದೆ.

ಗುಜರಾತ್‌ನಲ್ಲಿ ಹೊಸದಾಗಿ 114, ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ದೆಹಲಿಯಲ್ಲಿ 24 ಗಂಟೆಗಳಲ್ಲಿ 66 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟಾರೆಯಾಗಿ ಅತೀ ಹೆಚ್ಚು ಎಂಬಂತೆ ಸಕ್ರಿಯ ಕೋವಿಡ್ ಪ್ರಕರಣದ ಸಂಖ್ಯೆ 2000 ದಾಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page