ಕ.ಸಾ.ಪದಿಂದ ಧರ್ಮತ್ತಡ್ಕದಲ್ಲಿ ‘ಕನ್ನಡ-ತುಳು ಬಾಂಧವ್ಯ’ ದತ್ತಿ ಉಪನ್ಯಾಸ ನಾಳೆ
ಧರ್ಮತ್ತಡ್ಕ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಶ್ರೀ ಗುಮ್ಮಣ್ಣ ಶೆಟ್ಟಿ ಜೈನ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಾಳೆ ಅಪರಾಹ್ನ 2.45 ಕ್ಕೆ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆÀ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ. ಪಿ .ಎನ್ ಮೂಡಿತ್ತಾಯ ಅವರು ‘ಕನ್ನಡ- ತುಳು ಬಾಂಧವ್ಯ ‘ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.
ಕ್ಯಾಂಪ್ಕೋ ಮಾಜಿ ಉಪಾಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೋಳಾರು, ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್.ಎನ್, ಶಾಲಾ ಪ್ರಬಂಧಕ ಶಂಕರನಾರಾಯಣ ಭಟ್, ಕಸಾಪ ಸಂಘಟನಾ ಕಾರ್ಯದರ್ಶಿ ಗಳಾದ ವಿಶಾಲಾಕ್ಷ ಪುತ್ರಕಳ, ರಾಮಚಂದ್ರ ಭಟ್,ಉಪನ್ಯಾಸಕ ಸತೀಶ್ ಕುಮಾರ್ ಶೆಟ್ಟಿ ಒಡ್ಡಂಬೆಟ್ಟು ಉಪಸ್ಥಿತರಿರುವರು. ಕಸಾಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಕನ್ನಡ ತುಳು ಭಾವ ಗಾಯನ ನಡೆಸುವರು.