ಗಣೇಶ್ ಕಾಸರಗೋಡು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ

ಬೆಂಗಳೂರು: ಇತ್ತೀಚೆಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರತಿಷ್ಠಿತ ವಾರ್ಷಿಕ ಅಪ್ಪಾಜಿಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕೊಪ್ಪಳದಲ್ಲಿ ಮಾರ್ಚ್ ೯ರಂದು ನಡೆಯುವ ಕಾರ್ಯಕ್ರಮದಲ್ಲಿ   ಗಣೇಶ್ ಕಾಸರಗೋಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಳೆದ ೪೫ ವರ್ಷಗಳಿಂದ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಗಣೇಶ್ ಕಾಸರಗೋಡು ಅವರು ಈಗಾಗಲೇ ಕರ್ನಾಟಕ ರಾಜ್ಯ ಸಿನಿಮಾ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಮಂತ್ರಾಲಯದ ವಿಜಯ ವಿಠಲ ಪ್ರಶಸ್ತಿ, ಸಾಧನಾ ರಾಜ್ಯ ಪ್ರಶಸ್ತಿ, ಇಂಡಿವುಡ್ ಎಕ್ಸೆಲೆನ್ಸ್ ಪ್ರಶಸ್ತಿ, ಮೀಡಿಯಾ ಅಚೀವ್ಮೆಂಟ್ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ.

RELATED NEWS

You cannot copy contents of this page