ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣ ಬಳಿಯ ಇಎಸ್‌ಐ ಆಸ್ಪತ್ರೆಯ ಬಳಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾರಾಟಕ್ಕಾಗಿ ತರಲಾಗಿದ್ದ 27.25 ಗ್ರಾಂ ಗಾಂಜಾ ಪತ್ತೆಹಚ್ಚಲಾಗಿದೆ. ಇದಕ್ಕೆ ಸಂಬಂಧಿಸಿ ಮಧೂರು ಅರಂತೋಡು ಕೋಟೆಕಣಿ ಕಾಂತಲ ಹೌಸ್‌ನ ಹಸೈನಾರ್ (53) ಎಂಬಾತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.