ಗಾಂಜಾ ಸಹಿತ ಓರ್ವ ಸೆರೆ
ಮಂಜೇಶ್ವರ: ಗಾಂಜಾ ಕೈವಶವಿರಿಸಿಕೊಂಡಿದ್ದ ಅನ್ಯರಾಜ್ಯ ಕಾರ್ಮಿಕನನ್ನು ಮಂಜೇಶ್ವರ ಎಸ್.ಐ. ಉಮೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ನಿವಾಸಿಯೂ ಕಡಂಬಾರ್‌ನ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ರಬೇಂದರ್ ಸಿಂಗ್ (25) ಎಂಬಾತ ಬಂಧಿತ ಆರೋಪಿ. ಈತನ ಕೈಯಿಂದ 12.49 ಗ್ರಾಂ ಗಾಂಜಾ ವಶಪಡಿಸಲಾಗಿದೆ. ನಿನ್ನೆ ಸಂಜೆ ಕಡಂಬಾರ್ ಒಳರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ರಬೇಂದರ್ ಸಿಂಗ್‌ನನ್ನು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ಪೊಲೀ ಸರು ತಿಳಿಸಿದ್ದಾರೆ.