ಗುತ್ತಿಗೆದಾರ ನಿಗೂಢ ನಾಪತ್ತೆ : ಸ್ಕೂಟರ್ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆ
ಉಪ್ಪಳ: ಗುತ್ತಿಗೆದಾರರೊಬ್ಬರು ನಿಗೂಢವಾಗಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉಪ್ಪಳ ಮಣ್ಣಂಗುಳಿ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶರೀಫ್ (32) ನಾಪತ್ತೆಯಾದ ವ್ಯಕ್ತಿ. ಮೊನ್ನೆ ಸಂಜೆ ಇವರು ಸ್ಕೂಟರ್‌ನಲ್ಲಿ ಮನೆಯಿಂದ ಹೊರಗೆ ಹೋಗಿದ್ದರು. ಅನಂತರ ಮನೆಗೆ ಮರಳಿ ಬಂದಿಲ್ಲ. ಇದರಿಂದ ಅವರಿಗಾಗಿ ವಿವಿಧೆಡೆ ಹುಡುಕಾಟ ನಡೆಸಿದ್ದು, ಆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆ ತಂದೆ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಶರೀಫ್ ಕಟ್ಟಡ ನಿರ್ಮಾಣ ಗುತ್ತಿಗೆದಾರನಾಗಿದ್ದರು. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆದ ಸ್ಥಿತಿಯಲ್ಲಿರುವುದಾಗಿ ತಿಳಿದುಬಂದಿದೆ.
ಇದೇ ವೇಳೆ ಶರೀಫ್‌ರ ಸ್ಕೂಟರ್ ಮೊನ್ನೆ ರಾತ್ರಿ ಶಿರಿಯ ಸೇತುವೆ ಬಳಿ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತಿಳಿದ ಮನೆಯವರು ಹಾಗೂ ಮಂಜೇಶ್ವರ ಪೊಲೀಸರು ಅದನ್ನು ತೆಗೆದುಕೊಂಡು ಬಂದಿದ್ದಾರೆ. ಶರೀಫ್‌ಗಾಗಿ ಹುಡುಕಾಟ ತೀವ್ರಗೊಳಿಸಲಾಗಿದೆ.