ಚಿನ್ಮಯ ವಿದ್ಯಾಲಯದಲ್ಲಿ ಕ್ರೀಡಾ ಮೇಳ
ಕಾಸರಗೋಡು: ಚಿನ್ಮಯ ವಿದ್ಯಾಲಯದಲ್ಲಿ ಕ್ರೀಡಾ ಮೇಳಕ್ಕೆ ಚಾಲನೆ ನೀಡಲಾಯಿತು. ವಿದ್ಯಾನಗರ ಸರ್ಕಲ್ ಇನ್ಸ್‌ಪೆಕ್ಟರ್ ವಿಪಿನ್ ಯು.ಪಿ. ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ಒಳಗಾಗದೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಅತೀ ಮುಖ್ಯ ಎಂದು ತಿಳಿಸಿದರು. ಪ್ರಾಂಶುಪಾಲ ಸುನಿಲ್ ಕುಮಾರ್ ಕೆ.ಸಿ. ಮಾತನಾಡಿ ದರು. ಉಪ ಪ್ರಾಂಶುಪಾಲ ಪ್ರಶಾಂತ್ ಬಿ., ಮುಖ್ಯೋಪಾಧ್ಯಾಯಿನಿಯರಾದ ಪೂರ್ಣಿಮಾ ಎಸ್.ಆರ್, ಸಿಂಧು ಶಶೀಂದ್ರನ್, ಅಧ್ಯಾಪಕವೃಂದ, ಅಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಿಪ್ರ ಶೆಟ್ಟಿ ಸ್ವಾಗತಿಸಿ, ಜಿಯಾ ಖಲೀಲ್ ವಂದಿಸಿದರು.