ಚುನಾವಣೆ ನಂತರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಬದಲಾವಣೆ

ನವದೆಹಲಿ: ಮಹಾರಾಷ್ಟ್ರ ಮತ್ತು ಝಾರ್ಖಂಡ್ ರಾಜ್ಯಗಳ ವಿಧಾನಸಭೆಗಳಿಗೆ ನಡೆಯಲಿರುವ ಚುನಾವಣೆಯ ಬಳಿಕ ಕೇರಳ ಸೇರಿದಂತೆ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲ ಹುದ್ದೆಗಳನ್ನು ಪುನರ್‌ರಚಿಸಲಾಗುವುದು.  ಮೂರರಿಂದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ ರಾಜ್ಯಪಾಲರನ್ನು ಬೇರೆಡೆಗೆ ವರ್ಗಾಯಿಸುವ ಸಾಧ್ಯತೆ ಇದೆ. ವಿಶೇಷವಾಗಿ ಎಡರಂಗದ ಆಡಳಿತದ ಕೇರಳ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಾದರ್‌ಗಳ ರಾಜ್ಯಪಾಲರನ್ನು ಬದಲಾಯಿಸುವ ಸಾಧ್ಯತೆ ಇದೆ.

ಕೇರಳ ರಾಜ್ಯಪಾಲರಾಗಿ ಆರೀಫ್ ಮೊಹಮ್ಮದ್ ಖಾನ್ ಐದು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಅವರಿಗೆ ರಾಜ್ಯಪಾಲ ಸ್ಥಾನದಿಂದ ಬೇರೆ ಯಾವುದಾದರೂ ಹೊಸ ಹುದ್ದೆ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಮತ್ತು ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನ ರಾಜ್ಯಪಾಲ ಆಚಾರ್ಯ ದೇವವೃತ್ ಅವರು ಮೂರು ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿದ್ದಾರೆ.

ಇದರ ಹೊರತಾಗಿ ೨೦೨೧ ಜುಲೈ ೧೫ರಂದು ಅಧಿಕಾರ ವಹಿಸಿಕೊಂಡ ಗೋವಾ ರಾಜ್ಯಪಾಲ ಕೇ ರಳೀಯರಾಗಿರುವ ಪಿ.ಎಸ್. ಶ್ರೀಧರನ್ ಪಿಳ್ಳೆ ಮತ್ತು ಹರ್ಯಾಣ ರಾಜ್ಯಪಾಲ ಭಂಡಾರು ದತ್ತಾತ್ರೇಯ ಅವರು ಮೂರು ವರ್ಷಗಳಿಗೂ ಹೆಚ್ಚು ಅವಧಿಯನ್ನು ಪೂರೈಸಿದ್ದಾರೆ. ಅವರ ಹೊರತಾಗಿ ಮಧ್ಯಪ್ರದೇಶ ರಾಜ್ಯಪಾಲ ಮಂಗುಬಾಯ್ ಸಿ. ಪಟೇಲ್, ಉತ್ತರಾಖಂಡ್ ರಾಜ್ಯಪಾಲ ಗುರ್‌ಮಿತ್ ಸಿಂಗ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದೀ ಬೆನ್ ಪಟೇಲ್‌ರನ್ನೂ ಬೇರೆಡೆಗೆ ವರ್ಗಾಯಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You cannot copy content of this page