ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಓರ್ವ ಸೇನಾಧಿಕಾರಿ ಸೇರಿ ಮೂವರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿನ್ನೆ ರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೇನಾಧಿಕಾರಿ ಮತ್ತು ಮೂವರು ಯೋಧರು ಚಿಕಿತ್ಸೆ ಫಲಕಾರಿ ಯಾಗದೆ ಹುತಾತ್ಮರಾಗಿದ್ದಾರೆ. ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ ನಿನ್ನೆ ರಾತ್ರಿ 7.45ರ ವೇಳೆ ದೇಸಾ ಅರಣ್ಯ ಪ್ರದೇಶದ ಧಾರಿಗೋಟೆ ಕುರಾರ್ಬಾಗಿಯಲ್ಲಿ ಜಂಟಿ ಕಾರ್ಡನ್ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಅಲ್ಲಿ ಅಡಗಿ ನಿಂತಿದ್ದ ಭಯೋ ತ್ಪಾದಕರು ಸೇನೆಯ ಮೇಲೆ ಗುಂಡು ಚಲಾಯಿಸತೊಡ ಗಿದ್ದಾರೆ.
20 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದು ಅದರಲ್ಲಿ ಸೇನಾ ಅಧಿಕಾರಿ ಸೇರಿದಂತೆ ನಾಲ್ವರು ಗಾಯ ಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವು ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.