ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ, ಸಂಸ್ಕೃತಿ ಉತ್ಸವ: ಪೂರ್ವಭಾವಿ ಸಭೆ
ಕುಂಬಳೆ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನಾಲ್ಕನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಸಂಸ್ಕೃತಿ ಉತ್ಸವ ಮೇ 3ರಂದು ಬೆಳಿಗ್ಗೆ 9ರಿಂದ ಸೀತಾಂಗೋಳಿ ಅಲ ಯನ್ಸ್ ಸಭಾ ಭವನದಲ್ಲಿ ಜರಗಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಪ್ರವಾಸೋಧ್ಯಮ ಇಲಾಖೆ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಜಂಟಿ ಸಹಕಾರ ದಲ್ಲಿ ಕಾರ್ಯಕ್ರಮ ಆಯೋಜಿಸ ಲಾಗಿದೆ. ಈ ಬಗ್ಗೆ ರಚಿಸಲಾದ ಸ್ವಾಗತ ಸಮಿತಿ ಸಹಿತ ವಿವಿಧ ಸಮಿತಿಗಳ ಸಭೆ ಸೀತಾಂಗೋಳಿ ಸಂತೋಷ್ ಕ್ಲಬ್ ಕಾರ್ಯಾಲಯದಲ್ಲಿ ಜರಗಿತು.
ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ ಮಾಹಿತಿ ನೀಡಿದರು. ಬ್ಲೋಕ್ ಪಂಚಾಯತ್ ಸದಸ್ಯ ಸುಕುಮಾರ ಕುದ್ರೆಪ್ಪಾಡಿ, ಧಾರ್ಮಿಕ ಮುಖಂಡ ರಾಮಪ್ಪ ಮಂಜೇಶ್ವರ, ಮಹಾಲಿಂಗ ಕೆ, ಅಪ್ಪಣ್ಣ ಸೀತಾಂಗೋಳಿ, ಮಾನ ಮಾಸ್ತರ್, ದೇವದಾಸ್ ಪಾರೆಕಟ್ಟೆ, ಅಜಿತ್ ಸ್ವರ್ಗ, ಜೋನ್ ಡಿಸೋಜಾ ಉಪಸ್ಥಿತರಿದ್ದರು. ನ್ಯಾಯವಾದಿ ಥೋಮಸ್ ಡಿಸೋಜಾ ಸ್ವಾಗತಿಸಿ, ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು.
ಧರ್ಮಸ್ಥಳ ಸ್ವ-ಸಹಾಯ ಸಂಘ, ಶೌರ್ಯ ಘಟಕ, ಸಂತೋಷ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್, ರಚನ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್, ವಿವಿಧ ಕುಟುಂಬಶ್ರೀ ಘಟಕಗಳು, ಕರ್ನಾಟಕದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.