ಜಿಲ್ಲೆಯಲ್ಲಿ ಚುನಾವಣೆ ತಯಾರಿ ಸರಿಯಾದ ದಿಶೆಯಲ್ಲಿ- ಜಿಲ್ಲಾ ನಿರೀಕ್ಷಕ
ಕಾಸರಗೋಡು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳು ಸರಿಯಾದ ದಿಶೆಯಲ್ಲಿ ಮುಂ¥್ಣ್ನÈ್ಣÂ ¾್ಣ್ನ್ನತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ನಿರೀಕ್ಷಕ ನುಡಿದಿದ್ದಾರೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೆÀÃರಿಯ ಸಮ್ಮೇಳನ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿ ಕೆ. ಇಂ¨ ಶೇಖರ್, ಸಾರ್ವಜನಿಕ ನಿರೀಕ್ಷಕ ಋಷಿರೇಂದ್ರ ಕುಮಾರ್, ಪೊಲೀಸ್ ವೀಕ್ಷಕ ಸಂತೋಷ್ ಸಿಂಗ್ ಗೌರ್, ಚುನಾವಣಾ ವೆಚ್ಚ ನಿರೀಕ್ಷಕ ಆನಂದ್ ರಾಜ್ ಉಪಸ್ಥಿತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಪೊಲೀಸ್, ಅರಣ್ಯ ಇಲಾಖೆ ಮತ್ತು ಅಬಕಾರಿ ಇಲಾಖೆಗೆ ಸಂಬAಧಪಟ್ಟ ಜಿಲ್ಲಾ ಮುಖ್ಯಸ್ಥರ ಸಭೆಯಲ್ಲಿ ಚುನಾವಣಾ ಚಟುವಟಿಕೆಗಳನ್ನು ಮೌಲ್ಯಮಾಪನ ಮಾಡಲಾಯಿತು. ಸಾರ್ವಜನಿಕ ವೀಕ್ಷಕ ಋಷಿರೇಂದ್ರ ಕುಮಾರ್ ಮಾತನಾಡಿ, ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯ ಲ್ಲಿರುವಂತೆ ಜಿಲ್ಲೆಯಲ್ಲಿ ಚುನಾವಣಾ ಚಟುವಟಿಕೆಗಳು ಸರಿಯಾದ ದಿಶೆಯಲ್ಲಿ ಸಾಗುತ್ತಿವೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯ ವಾಗಿದೆ. ಜಿಲ್ಲೆಯ ಗಡಿ ಭಾಗಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಸಂಬAಧಿಸಿದ ಅಧಿಕಾರಿಗಳು ಮತದಾ ನದ ದಿನದವರೆಗೆ ಮಾತ್ರವಲ್ಲದೆ ಮತ ಎಣಿಕೆಯಾದ ಮೇಲೆ ಚುನಾವಣಾ ವೆಚ್ಚ ಪಟ್ಟಿ ಸಮರ್ಪಿಸುವವರೆಗೆ ಪ್ರತಿ ಹಂತಗಳಲ್ಲಿಯೂ ಸಂಬAಧಪಟ್ಟ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಬಿಜೋಯ್, ಎಡಿಎಂ ಕೆ.ವಿ.ಶ್ರುತಿ, ಉಪ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್, ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೆ.ಕೈನಿಕರ, ಚುನಾವಣಾ ಅಪರ ಜಿಲ್ಲಾಧಿಕಾರಿ ಪಿ.ಅಖಿಲ್, ಸಹಾಯಕ ಚುನಾವಣಾಧಿಕಾರಿಗಳಾದ ಪಿ.ಶಾಜು, ಪಿ.ಬಿನುಮೋನ್ ಮತ್ತು ರೀಟಾ ನಿರ್ಮಲ್ ಗೋಮ್ಸ್, ವಿಭಾಗೀ ಯ ಅರಣ್ಯಾಧಿಕಾರಿ ಕೆ. ಅಶ್ರಫ್, ಅಬಕಾರಿ ಉಪ ಆಯುಕ್ತ ಪಿ.ಕೆ. ಜಯರಾಜ್, ನೋಡಲ್ ಅಧಿಕಾರಿಗಳು ಮತ್ತು ಸಹಾಯಕ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಚುನಾವಣಾ ಚಟುವಟಿಕೆಗಳ ಕುರಿತಾದ ವಿಡಿಯೋ ಪ್ರದರ್ಶಿಸಲಾಯಿತು. ಜಿಲ್ಲಾಧಿಕಾರಿ ಕೆ.ಇಂಬಶೇಖರ್ ಸ್ವಾಗತಿಸಿ, ಉಪ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್ ವಂದಿಸಿದರು.