ಚೆನ್ನೈ: ತಮಿಳು ಸಿನೆಮಾ ರಂಗದ ಸೂಪರ್ ಸ್ಟಾರ್ ರಜನೀಕಾಂತ್ (73)ರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿ ಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ತೀವ್ರ ಹೊಟ್ಟೆನೋವು ಅನುಭವಗೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ರಜನಿಕಾಂತ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.