ನಾಲಂದ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆ
ಪೆರ್ಲ: ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು. ಪ್ರಾಂಶುಪಾ¯ ಶಂಕರ ಖಂಡಿಗೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅವರು ಮಾತನಾಡಿ, 1949ರ ನ.26ರಂದು ನಮ್ಮ ದೇಶದ ಸಂವಿಧಾನಕ್ಕೆ ಅಂಗೀಕಾರ ಲಭಿಸಿದೆ. 1950 ನ.26ರಲ್ಲಿ ಜಾರಿಗೆ ಬಂದು ಭಾರತದ ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾನತೆಯ ಚೌಕಟ್ಟನ್ನು ವ್ಯಾಖ್ಯಾನಿಸುವ ಮೂಲಭೂತ ದಾಖಲೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂವಿಧಾನ ಅಂಗೀಕಾರಗೊAಡು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂವಿಧಾನದ ಅಮೃತಮಹೋತ್ಸವ ಆಚರಿಸಲಾಗುತ್ತಿದೆ ಎಂದರು. ಎನ್ನೆಸ್ಸೆಸ್ ಸ್ವಯಂಸೇವಕಿ ಮೇಘ ಸ್ವಾಗತಿಸಿದರು. ಅನುಜ್ಞಾ ವಂದಿಸಿದರು. ಸ್ವಾತಿ ನಿರೂಪಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಸಂಯೋಜಿಸಿದರು.