ನಾಲ್ವರು ವಿದ್ಯಾರ್ಥಿನಿಯರಿಗೆ ದೌರ್ಜನ್ಯ: ಅಧ್ಯಾಪಕನ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 4 ಕೇಸು ದಾಖಲು

ಕಾಸರಗೋಡು: 10 ವರ್ಷ ಪ್ರಾಯದ ನಾಲ್ಕು ಹೆಣ್ಮಕ್ಕಳನ್ನು ದೌರ್ಜನ್ಯಗೈದ ದೂರಿನಂತೆ ಅಧ್ಯಾಪಕನ ವಿರುದ್ಧ ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಾಪಕ ತಲೆಮರೆಸಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ನಡೆದ ಕೌನ್ಸಿಲಿಂಗ್‌ನಲ್ಲಿ ಈ ಬಗ್ಗೆ ದೂರು ಲಭಿಸಿದೆ. ಈ ಹಿನ್ನೆಲೆಯಲ್ಲಿ ಅಧ್ಯಾಪಕನ ವಿರುದ್ಧ ಪೋಕ್ಸೋ ಕೇಸು ದಾಖಲಿಸಲಾಗಿದೆ. ಈಬಗ್ಗೆ ತನಿಖೆ ನಡೆಸುತ್ತಿದ್ದ ಮಧ್ಯೆ ಈತನ ವಿರುದ್ಧ ಇದೇ ರೀತಿಯ ದೂರು ಲಭಿಸಿದ್ದು, ಅದರಲ್ಲೂ ಕೇಸು ದಾಖಲಿಸಲಾಯಿತು.

Leave a Reply

Your email address will not be published. Required fields are marked *

You cannot copy content of this page