ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಕೈವಶವಿರಿಸಿದ ಬೀಯರ್ ವಶ

ಕಾಸರಗೋಡು: ಚೆರ್ಕಳ ಬೇವಿಂಜೆಯಲ್ಲಿ ಕಾಸರಗೋಡು ಅಬಕಾರಿ ರೇಂಜ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ರಾಜೀವನ್ ಎ.ವಿಯವರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಬೀಯರ್ (3.9 ಲೀಟರ್) ಕೈವಶವಿರಿಸಿಕೊಂಡ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ ಆ ಮಾಲನ್ನು ವಶಪಡಿಸಲಾಗಿದೆ.  ವೇಲಾಯುಧನ್ ಎಂಬಾತನ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಈ ಮಾಲು ಸಾಗಿಸಲು ಬಳಸಲಾದ ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ.

Leave a Reply

Your email address will not be published. Required fields are marked *

You cannot copy content of this page