ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸು ವಂತೆ ಬೆಂಗಳೂರು ಪೊಲೀಸರಿಗೆ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾ ಲಯ ಆದೇಶ ನೀಡಿದೆ.

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಜನಪ್ರತಿನಿ ಧಿಗಳ ನ್ಯಾಯಾಲಯ ನೀಡಿದ ಆದೇಶ ಮಾದರಿಯಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಬೆದರಿಕೆ ಹಾಕಿ ಚುನಾವಣಾ ಬಾಂಡ್ ವಸೂಲಿ ಮಾಡಲಾಗಿದೆಯೆಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ್ ಐಯ್ಯರ್ ಎಂಬವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತಿಲಕನಗರ ಪೊಲೀಸರಿಗೆ ನಿರ್ದೇಶ ನೀಡಿದೆ. ಇದರ ಮುಂದಿನ ವಾದವನ್ನು ನ್ಯಾಯಾಲಯ ಅಕ್ಟೋಬರ್ 10ಕ್ಕೆ ಮುಂದೂಡಿದೆ.

You cannot copy contents of this page