ನಿಲ್ಲಿಸದೆ ಪರಾರಿಯಾದ ಕಾರು: ಚಾಲಕನ ವಿರುದ್ಧ ಕೇಸು
ಮಂಜೇಶ್ವರ: ವಾಹನ ತಪಾಸಣೆ ವೇಳೆ ಕಾರು ನಿಲ್ಲಿಸದೆ ಪರಾರಿಯಾಗಿದ್ದು, ಚಾಲಕನ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ನಿನ್ನೆ ಸಂಜೆ 5.45ರ ವೇಳೆ ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಜೇಶ್ವರ ಠಾಣೆಯ ಎಸ್.ಐ. ಸುಮೇಶ್ ರಾಜ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಂಗಳೂರಿನಿಂದ ಕಾಸರಗೋಡಿ ನತ್ತ ಆಗಮಿಸುತ್ತಿದ್ದ ಇನ್ನೋವಾ ಕಾರನ್ನು ನಿಲ್ಲಿಸಲು ಸೂಚಿಸಿದರೂ ಪರಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ.