ನಿಷೇಧಿತ ಹೊಗೆಸೊಪ್ಪು ಉತ್ಪನ್ನ ಸಹಿತ ಓರ್ವ ಸೆರೆ
ಮಂಜೇಶ್ವರ: ನಿಷೇಧಿತ ಹೊಗೆಸೊಪ್ಪು ಉತ್ಪನ್ನ ಸಹಿತ ಓರ್ವನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಾಕ್ರಬೈಲು ಬಾಳ್ತಾಜೆ ನಿವಾಸಿ ಮುಹಮ್ಮದ್ ಪಿ. (60)ನನ್ನು 51 ಪ್ಯಾಕೆಟ್ ಪಾನ್ ಮಸಾಲೆ ಸಹಿತ ನಿನ್ನೆ ರಾತ್ರಿ ಹೊಸಂಗಡಿ ಬಸ್ ನಿಲ್ದಾಣ ಬಳಿಯಿಂದ ಎಸ್‌ಐ ರತೀಶ್ ನೇತೃತ್ವದಲ್ಲಿ ಸೆರೆ ಹಿಡಿಯಲಾಗಿದ್ದು, ಕೇಸು ದಾಖಲಿಸಿದ್ದಾರೆ. ಪೊಲೀಸರು ಗಸ್ತು ನಡೆಸುತ್ತಿದ್ದ ಮಧ್ಯೆ ಸಂಶಯಾಸ್ಪದವಾಗಿ ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಿದಾಗ ಹೊಗೆಸೊಪ್ಪು ಉತ್ಪನ್ನ ಪತ್ತೆಯಾಗಿದೆ.