ನೀಟ್-ಯುಜಿ ವಿವಾದ: ಸು.ಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ ಇಂದು
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ 2024 ಸಂಬಂಧಿ ಸಿದ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಮೇ 5ರಂದು ನಡೆದ ಪರೀಕ್ಷೆ ಯಲ್ಲಿ ಅಕ್ರಮಗಳು ಮತ್ತು ದುಷ್ಕೃತ್ಯಗಳು ನಡೆದಿವೆ ಎಂದು ಆರೋಪಿಸಿ 30ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಸಲ್ಪಟ್ಟಿವೆ. ಮಾತ್ರವಲ್ಲ ಹೊಸದಾಗಿ ಪರೀಕ್ಷೆ ನಡೆಸುವಂತೆಯೂ ಆಗ್ರಹಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಸಲ್ಪ ಟ್ಟಿವೆ. ಈ ಎಲ್ಲಾ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರ ಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿ ಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಎಂಬವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ನ್ಯಾಯಪೀಠ ಪರಿಶೀಲಿಸಲಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಗ್ರೇಸ್ ಅಂಕ ನೀಡುವಲ್ಲಿ ವ್ಯತ್ಯಾಸಗಳು ಸೇರಿದಂತೆ ಅಕ್ರಮಗಳ ಆರೋಪಗಳು ಭಾರತದಾದ್ಯಂತ ಪ್ರತಿಪಕ್ಷಗಳಿಂದ ಪ್ರತಿಭಟನೆ ಮತ್ತು ರಾಜಕೀಯ ಆಕ್ರೋಶಕ್ಕೂ ಕಾರಣವಾಗಿದೆ. ನಿಗದಿತ ದಿನಾಂಕಕ್ಕಿಂತ 10 ದಿನಗಳ ಮುಂಚಿತವಾಗಿಯೇ ಜೂನ್ ೪ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು.
ನೀಟ್-ಯುಜಿ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ರದ್ದುಗೊಳಿಸುವಂತೆಯೂ ಕೆಲವು ಅರ್ಜಿಗಳಲ್ಲಿ ಆಗ್ರಹಪಡಲಾಗಿದೆ. ದೊಡ್ಡ ಪ್ರಮಾಣದ ಗೌಪ್ಯತೆಯ ಉಲ್ಲಂಘನೆ, ಪುರಾವೆಗಳ ಕೊರತೆ ಮತ್ತು ಸಾವಿರಾರು ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ನಕಾರಾತ್ಮಕ ಪರೀಣಾ ಬೀರುತ್ತದೆಯೆಂದು ಹಲವು ಅರ್ಜಿಗಳಲ್ಲಿ ತಿಳಿಸಲಾಗಿದೆ.