ನೀರ್ಚಾಲಿನಲ್ಲಿ ಎಸ್.ವಿ. ಭಟ್ ಸಂಸ್ಮರಣೆ ನಾಳೆ

ನೀರ್ಚಾಲು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಪೂರ್ವಾಧ್ಯಕ್ಷರೂ, ನಿವೃತ್ತ ಸಹಾಯಕ ವಿದ್ಯಾಧಿಕಾರಿಯಾಗಿದ್ದ ಎಸ್.ವಿ. ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ನಾಳೆ ಸಂಜೆ ೪ ಗಂಟೆಗೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಉನ್ನತ ಪ್ರೌಢಶಾಲೆಯಲ್ಲಿ ನಡೆಯಲಿದೆ. ವಿಶ್ರಾಂತ ಪ್ರಾಂಶುಪಾಲ ಡಾ. ಬೇ.ಸಿ. ಗೋಪಾಲಕೃಷ್ಣ ಭಟ್ ಸಂಸ್ಮರಣಾ ಭಾಷಣ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ, ನೀರ್ಚಾಲು  ಮಹಾಜನ ಸಂಸ್ಕೃತ ಕಾಲೇಜು ಉನ್ನತ ಪ್ರೌಢಶಾಲೆಯ ಪ್ರಬಂಧಕ ಜಯದೇವ ಖಂಡಿಗೆ, ಪೆರ್ಲ ಸತ್ಯನಾರಾಯಣ ಪ್ರೌqs ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶಿವಕು ಮಾರ್ ಕೆ, ನೀರ್ಚಾಲು ಮಹಾಜನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಪ್ರಕಾಶ್ ಎಂ.ಕೆ ಇವರು ಎಸ್.ವಿ. ಭಟ್ ಅವರ ಒಡನಾಡದ ಸವಿನೆನಪುಗಳನ್ನು ಮೆಲುಕು ಹಾಕುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಪದಾಧಿಕಾರಿಗಳಾದ ವಿಶಾಲಾಕ್ಷ ಪುತ್ರಕಳ, ಪ್ರದೀಪ್ ಕುಮಾರ್ ಶೆಟ್ಟಿ ಬೇಳ,  ರಾಮಚಂದ್ರ ಭಟ್ ದರ್ಭೆತ್ತಡ್ಕ, ನಿವೃತ್ತ ಶಿಕ್ಷಕಿ ಮಾಣಿ ಪಿ.ಎಸ್ ಉಪಸ್ಥಿತರಿರುವರು.

RELATED NEWS

You cannot copy contents of this page