‘ನೆನೆದ ಕಾರ್ಯ ನೆರವೇರಬೇಕಾದರೆ ದೇವರ ಅನುಗ್ರಹವಿರಬೇಕು’ ಕುಂಟಿಕಾನ ಮಠ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಎಡನೀರುಶ್ರೀ

ಬದಿಯಡ್ಕ: ನೆನೆಸಿದ ಕಾರ್ಯಗಳು ನೆರವೇರಬೇಕಾದರೆ ದೇವರ ಅನುಗ್ರಹವಿರಬೇಕು. ಮನುಷ್ಯ ಪ್ರಯತ್ನ ಎಷ್ಟೇ ಇದ್ದರೂ ದೈವಸಂಕಲ್ಪ ಬೇರೆಯಿರುತ್ತದೆ. ಈ ಕ್ಷೇತ್ರವು ಸುಂದರವಾಗಿ ರೂಪುಗೊಂಡಿ ರುವುದು ಶಂಕರನಾರಾಯಣನ ಅನುಗ್ರಹ ಭಗವದ್ಭಕ್ತರ ಭಕ್ತಿಯ ಫಲ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು.
ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೀಪಬೆಳಗಿಸಿ ಚಾಲನೆಗೈದು ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಬಿ.ವಸಂತಪೈ ಬದಿಯಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಮುಂಡಪಳ್ಳ ಶ್ರೀ ರಾಜರಾಜೇ ಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ.ಶೆಟ್ಟಿ, ಮುಂಬೈ ಉದ್ಯಮಿ ಕೃಷ್ಣಪ್ರಸಾದ ರೈ ಕುತ್ತಿಕಾರು, ಫಿಟ್ ಪರ್ಸನ್ ಹಾಗೂ ಬ್ರಹ್ಮಕಲ ಶೋತ್ಸವ ಸಮಿತಿಯ ಕೋಶಾದಿsಕಾರಿ ರಮಾನಾಥ ಶೆಟ್ಟಿ, ಕೇರಳ ಸರಕಾರದ ಸಾರ್ವಜನಿಕ ಆಡಳಿತ ವಿಭಾಗದ ನಿವೃತ್ತ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ ಐಎಎಸ್, ಮಾತೃಸಮಿತಿ ಅಧ್ಯಕ್ಷೆ ಜಯಂತಿ ವಿ. ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್ ಎಂ.ವಿ. ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಆಳ್ವ ಕಳತ್ತೂರು ಸ್ವಾಗತಿಸಿ, ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿ.ಬಿ.ಕುಳಮರ್ವ ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಕೆ.ಎಂ.ಶ್ಯಾಮಭಟ್ ಉಪಸ್ಥಿತರಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಶ್ಯಾಮಪ್ರಸಾದ ಕುಳಮರ್ವ ನಿರೂಪಿಸಿದರು.
ನಿನ್ನೆ ಕ್ಷೇತ್ರದಲ್ಲಿ ಗಣಪತಿ ಹೋಮ, ಪ್ರೋಕ್ತ ಹೋಮ, ಪ್ರಾಯಶ್ಚಿತ್ತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ನಡೆಯಿತು. ಶ್ರೀ ಅನ್ನಪೂರ್ಣೇಶ್ವರಿ ಭಜನಾ ಸಂಘ ಕುಂಟಿಕಾನ, ಶ್ರೀ ವೀರಾಂಜನೇಯ ಬಾಲಗೋಕುಲ ಏಣಿಯರ್ಪು, ಶ್ರೀ ಕುದ್ರೆಕ್ಕಾಳಿ ಅಮ್ಮ ಭಜನಾ ಸಂಘ ರತ್ನಗಿರಿ, ಶ್ರೀ ಕುಮಾರಸ್ವಾಮಿ ಮಹಿಳಾ ಭಜನಾ ಸಂಘ ಪುತ್ತಿಗೆ, ಶ್ರೀ ಉದನೇಶ್ವರ ಭಕ್ತವೃಂದ ಭಜನಾ ಮಂಡಳಿ ಬದಿಯಡ್ಕ, ಶ್ರೀ ಮಹಾವಿಷ್ಣು ಭಜನಾ ಸಂಘ ಮುಂಡಿತ್ತಡ್ಕ ಭಜನಾ ಝೇಂಕಾರದಲ್ಲಿ ಪಾಲ್ಗೊಂಡರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ವಿದುಷಿ ಸರಸ್ವತಿ ಕೃಷ್ಣನ್ ಮತ್ತು ಬಳಗ ಸಾರಂಗ ಸಂಗೀತ ಶಾಲೆ ಕುಮಾರಮಂಗಲ ಬೇಳ ಇವರಿಂದ ಸಂಗೀತ ಕಚೇರಿ, ಅಪರಾಹ್ನ ಪರಮೇಶ್ವರ ಆಚಾರ್ಯ ಕಲಾಸೇವಾ ಪ್ರತಿಷ್ಠಾನ ನೀರ್ಚಾಲು ಇವರಿಂದ ಯಕ್ಷಗಾನ ತಾಳಮದ್ದಳೆ ಸಂಜೆ 7ರಿಂದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಪ್ರದರ್ಶನಗೊಂಡಿತು.
ನಾಳೆ ಬೆಳಗ್ಗೆ 6 ಗಂಟೆಗೆ ಗಣಪತಿ ಹೋಮ, ತತ್ವಹೋಮ, ತತ್ವಕಲಶಪೂಜೆ, ತತ್ವ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ತ್ರಿಕಾಲಪೂಜೆ, ಅಂಕುರ ಪೂಜೆ, ಸಂಜೆ ಅನುಜ್ಞಾಬಲಿ ಸಹಿತ ವಿವಿದs ಕಾರ್ಯP್ರÀಮಗಳು ನಡೆಯಲಿದೆ. ಭಜನೆ, ಶಾಸ್ತಿçÃಯ ಸಂಗೀತ, ಅಪರಾಹ್ನ 2ರಿಂದ ಹವ್ಯಕ ಯಕ್ಷಗಾನ ತಾಳಮದ್ದಳೆ, ಸಂಜೆ 6.30ರಿಂದ ತುಡರ್ ಕಲಾವಿದರ್ ಕಳತ್ತೂರು ಇವರಿಂದ ತುಳು ನಾಟಕ ವಿಶ್ವಜನನಿ ಪ್ರದರ್ಶನಗೊಳ್ಳಲಿದೆ.

Leave a Reply

Your email address will not be published. Required fields are marked *

You cannot copy content of this page