ನೇಣು ಬಿಗಿದು ಯುವಕ ಆತ್ಮಹತ್ಯೆ

ಉಪ್ಪಳ: ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಹೊಸಬೆಟ್ಟು ಸಸಿಹಿತ್ತಿಲುನಲ್ಲಿ ವಾಸಿಸುವ ಗೌತಮ್‌ರಾಜ್ (23) ನೇಣುಬಿಗಿದ ಯುವಕ. ಇವರು ಉಡುಪಿಯ ಸಂಸ್ಥೆಯೊಂದರಲ್ಲಿ ಕಂಪ್ಯೂಟರ್ ಕಾರ್ಟೂನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರೆನ್ನಲಾಗಿದೆ. ತಂದೆ ಶೇಖರ ಈ ಹಿಂದೆ ನಿಧನಹೊಂದಿದ್ದಾರೆ. ತಾಯಿಯ ಸಹೋದರಿಯ ಮನೆಯಲ್ಲಿ ವಾಸವಿದ್ದ ಇವರು ನಿನ್ನೆ ಮಧ್ಯಾಹ್ನ 1 ಗಂಟೆ ವೇಳೆಗೆ ಕೊಠಡಿಯೊಳಗೆ ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊಟಕ್ಕೆಂದು ಕರೆದರೂ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ನೇಣುಬಿಗಿದಿರು ವುದು ಪತ್ತೆಯಾಗಿದೆ. ಬಳಿಕ ಮಂಗ ಲ್ಪಾಡಿ ತಾಲೂಕು ಆಸ್ಪತ್ರೆಗೆ ತಲುಪಿಸ ಲಾಗಿದ್ದು, ಆ ವೇಳೆಗೆ ನಿಧನರಾಗಿ ದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿ ಸಲಾಗಿದೆ. ಮೃತರು ತಾಯಿ ಸತ್ಯಾವತಿ ಹಾಗೂ ಅಪಾರ  ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page