ನ್ಯಾಯಾಲಯಗಳ ಮೂಲಭೂತ ಸೌಕರ್ಯ ಹೆಚ್ಚಿಸಲು ಭಾರತೀಯ ಅಭಿಭಾಷಕ ಪರಿಷತ್ ಜಿಲ್ಲಾ ಸಮ್ಮೇಳನ ಆಗ್ರಹ
ಕಾಸರಗೋಡು: ಕಾಸರಗೋಡು, ಹೊಸದುರ್ಗ ನ್ಯಾಯಾಲಯಗಳ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕೆಂದು ಹಾಗೂ ನೂತನ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಕೂಡಲೇ ಆರಂಭಿಸಬೇಕೆಂದು ಭಾರತೀಯ ಅಭಿಭಾಷಕ ಪರಿಷತ್ ಜಿಲ್ಲಾ ಸಮ್ಮೇಳನ ಆಗ್ರಹಿಸಿದೆ. ಅಭಿಭಾಷಕ ಪರಿಷತ್ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಆರ್. ರಾಜೇಂದ್ರನ್ ಸಮ್ಮೇಳನ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಎ.ಸಿ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಉಪಾಧ್ಯಕ್ಷ ನ್ಯಾಯವಾದಿ ಬಿ. ರವೀಂದ್ರನ್, ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ಕರುಣಾಕರನ್ ನಂಬ್ಯಾರ್ ಮಾತನಾಡಿದರು. ನ್ಯಾಯವಾದಿ ಪಿ. ಮುರಳೀಧರನ್ ಸ್ವಾಗತಿಸಿ, ನ್ಯಾಯವಾದಿ ಕೆ.ಎಂ. ಬೀನ ವಂದಿಸಿದರು.
ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್, ಉಪಾಧ್ಯಕ್ಷರಾಗಿ ನ್ಯಾಯವಾದಿಗಳಾದ ಅನಂತರಾಮ ಪಿ, ಅನಿಲ್ ಕೆ.ಜಿ, ಕುಸುಮ ಎಂ, ಕಾರ್ಯದರ್ಶಿಯಾಗಿ ನ್ಯಾಯವಾದಿ ನವೀನ್‌ರಾಜ್ ಕೆ.ಜೆ, ಜೊತೆ ಕಾರ್ಯದರ್ಶಿಗಳಾಗಿ ನ್ಯಾಯವಾದಿಗಳಾದ ಸೂರ್ಯನಾರಾಯಣ ಎನ್, ಪ್ರಜೀತ್ ಎಸ್.ಕೆ, ಅಕ್ಷತ, ಕೋಶಾಧಿಕಾರಿಯಾಗಿ ನ್ಯಾಯವಾದಿ ಹರ್ಷಿತ ಆಯ್ಕೆಯಾದರು.