ಪಂಪಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮತ್ತೆ ಬೆಂಕಿ
ಪತ್ತನಂತಿಟ್ಟ: ಪಂಪಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮತ್ತೆ ಬೆಂಕಿ ಹತ್ತಿಕೊಂಡಿದೆ. ಇಂದು ಬೆಳಿಗ್ಗೆ ೬ ಗಂಟೆಗೆ ಈ ಘಟನೆ ನಡೆದಿದೆ. ಹಿಲ್ ವ್ಯೂನಿಂದ ಜನರನ್ನು ಹತ್ತಿಸಲು ಬಸ್‌ನ್ನು ಸ್ಟ್ಯಾಂಡ್ ತರುತ್ತಿದ್ದಾಗ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ತಲುಪಿ ಬೆಂಕಿ ನಂದಿಸಿದೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಘಟನೆ ವೇಳೆ ಬಸ್‌ನಲ್ಲಿ ಚಾಲಕ ಹಾಗೂ ಕಂಡಕ್ಟರ್ ಮಾತ್ರವೇ ಇದ್ದರು. ಇತ್ತೀಚೆಗೆ ಇದೇ ರೀತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ ಹತ್ತಿಕೊಂಡಿತ್ತು.