ಪತ್ರಕರ್ತರ ಸಂಘದಿಂದ ಕರ್ನಾಟಕ ರಾಜ್ಯಪಾಲರ ಭೇಟಿ

ಕುಂಬಳೆ: ಸಂವಿಧಾನದ ಕಾವಲು ಭಟರಾದ ಮಾಧ್ಯಮಗಳು  ಆಡಳಿತ ಯಂತ್ರ ಹಾಗೂ ಜನರ ಮಧ್ಯೆ ಪ್ರಧಾನ ಕೊಂಡಿಯಾಗಿ ಎಂದಿಗೂ ಸ್ತುತ್ಯಾರ್ಹ ಚಟುವಟಿಕೆಗಳಿಂದ ಮಹತ್ತರ ಜವಾಬ್ದಾರಿ ನಿರ್ವಹಿಸುತ್ತಿದೆ. ಸಮಾಜ- ವ್ಯವಸ್ಥೆಗಳ ಧ್ವನಿಯಾಗಿರುವ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳನ್ನು ಗಮನಿಸುತ್ತಿರು ವುದಾಗಿ ಕರ್ನಾಟಕ ರಾಜ್ಯಪಾಲ ಥಾಮರ್‌ಚಂದ್ ಗೆಹ್ಲೋಟ್ ಅಭಿಪ್ರಾಯ ವ್ಯಕ್ತಪಡಿಸಿದರು. ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜುಲೈಯಲ್ಲಿ ಕಾಸರಗೋಡಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಮಾರಂಭಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು. ರಾಜ್ಯ ಘಟಕದ ಕೋಶಾಧಿಕಾರಿ ವಾಸುದೇವ ಹೊಳ್ಳ, ನರೇಂದ್ರ ಪಾರೆಕಟ್ಟೆ, ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ, ಕಾರ್ಯದರ್ಶಿ ಪುರುಷೋತ್ತಮ ಭಟ್, ಹವ್ಯಾಸಿ ಬರಹಗಾರ ಗೋ.ನಾ.ಸ್ವಾಮಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಮೈನಶ್ರೀ ಭಾಗವಹಿಸಿದರು.

RELATED NEWS

You cannot copy contents of this page