ಪೈವಳಿಕೆ ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಭ್ರಷ್ಟಾಚಾರವೆಂಬ ಕಾಂಗ್ರೆಸ್ ಆರೋಪ ಅಸತ್ಯ- ಪಂ. ಅಧ್ಯಕ್ಷೆ
ಪೈವಳಿಕೆ: ಪೈವಳಿಕೆ ಪಂಚಾಯತ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ವಾರ್ಡ್ ಪ್ರತಿನಿಧಿಗಳು ತಮಗೆ ಇಷ್ಟವಾದ ರೀತಿಯಲ್ಲಿ ಕೃಷಿ ಕೆಲಸವನ್ನು ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆಸುತ್ತಿದ್ದಾರೆ ಎಂಬ ರೀತಿಯ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದ ವಿಚಾರವೆಂದು ಪಂಚಾಯತ್ ಅಧ್ಯಕ್ಷೆ ಜಯಂತಿ ಕೆ. ತಿಳಿಸಿದ್ದಾರೆ. ಇದು ಕಾಂಗ್ರೆಸ್‌ನ ರಾಜಕೀಯ ಕಪಟತನವಾಗಿದ್ದು, ಆರೋಪವಿದ್ದರೆ ಯಾವ ವಾರ್ಡ್‌ನ ಸದಸ್ಯರು ಯಾವ ರೀತಿ ಆರೋಪ ನಡೆಸಿದ್ದಾರೆ ಎಂದು ಸ್ಪಷ್ಟವಾಗಿ ಪುರಾವೆ ನೀಡಿ ಮೇಲಧಿಕಾರಿಗಳಲ್ಲಿ ತನಿಖೆ ನಡೆಸಲು ಒತ್ತಾಯಿಸಬೇಕೆಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ಪೈವಳಿಕೆ ಪಂಚಾಯತ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯ ಅಭಿವೃದ್ಧಿಯನ್ನು ಕಾಂಗ್ರೆಸ್‌ಗೆ ಸಹಿಸಲಾಗುತ್ತಿಲ್ಲವೆಂದು, ಆ ಹಿನ್ನೆಲೆಯಲ್ಲಿ ಸುಳ್ಳು ಆರೋಪಗಳನ್ನು ಕಾಂಗ್ರೆಸ್ ಹೊರಿಸುತ್ತಿದೆ ಎಂದು ಅಧ್ಯಕ್ಷೆ ತಿಳಿಸಿದ್ದಾರೆ.