ಪೊವ್ವಲ್‌ನಲ್ಲಿ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಆದೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಪೊವ್ವಲ್ ಬೆಂಚ್ ಕೋರ್ಟ್ ಸಮೀಪದ ನಿವಾಸಿ ಜಾಫರ್‌ರ ಪತ್ನಿ ಶೈಮಾ (35)ರ ಮೃತದೇಹ ಸ್ನಾನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದೆ. ಶೈಮ ಹಾಗೂ ಪತಿ ಮತ್ತು ಐದು ಮಕ್ಕಳು ಈ ಸಮಯದಲ್ಲಿ ಮನೆಯಲ್ಲಿದ್ದರೆನ್ನಲಾಗಿದೆ. ಮಕ್ಕಳು 13 ವರ್ಷಕ್ಕಿಂತ ಕೆಳ ಪ್ರಾಯದವರಾಗಿದ್ದಾರೆ. ಶೈಮಳು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮನೆಗೆ ತಲುಪಿ ತಪಾಸಣೆ ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದೆ. ಕಾಸರಗೋಡಿನಲ್ಲಿ ವ್ಯಾಪಾರಿಯಾಗಿದ್ದಾರೆ ಜಾಫರ್. ಶೈಮ ಮೃತಪಟ್ಟ ಹಿನ್ನೆಲೆಯಲ್ಲಿ ಜಾಫರ್ ನಾಪತ್ತೆಯಾಗಿದ್ದು, ಈತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.