ಪೋಕ್ಸೋ ಪ್ರಕರಣದ ಆರೋಪಿಗೆ 15 ವರ್ಷ ಸಜೆ, ದಂಡ

ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯ (ಪೋಕ್ಸೋ)ದ ನ್ಯಾಯಾಧೀಶರಾದ ಕೆ. ಸಂತೋಷ್ ಕುಮಾರ್ 15 ವರ್ಷ ಕಠಿಣ ಸಜೆ ಮತ್ತು 7೦,೦೦೦ ರೂ. ದಂಡ ವಿಧಿಸಿ ತೀರ್ಪು ನೀಡಿ ದ್ದಾರೆ. ಪಾಣತ್ತೂರು ಕುಂಡುಪಳ್ಳ ನಿವಾಸಿ ಕೆ.ವಿ. ಚಂದ್ರನ್ (41) ಎಂ ಬಾ ತನಿಗೆ ಈ ಶಿಕ್ಷೆ ವಿಧಿಸಲಾಗಿದೆ.  ದಂಡ ಪಾವತಿಸದಿ ದ್ದಲ್ಲಿ ಆರೋಪಿ 16 ತಿಂಗಳ ಹೆಚ್ಚುವರಿ ಸಜೆ ಅನುಭವಿ ಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

2017 ಮೇ ತಿಂಗಳಲ್ಲಿ ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಚಂದ್ರನ್ ವಿರುದ್ಧ ಆದೂರು ಪೊಲೀಸರು ಫೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಆದೂರು ಪೊಲೀಸ್  ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಎ. ಅನಿಲ್ ಕುಮಾರ್ ಈ ಪ್ರಕರಣದ ಬಗ್ಗೆ  ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರವಾಗಿ ಸ್ಪೆಷಲ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

Leave a Reply

Your email address will not be published. Required fields are marked *

You cannot copy content of this page