ಪೋಕ್ಸೋ ಪ್ರಕರಣ ಆರೋಪಿಗೆ ಎಂಟು ವರ್ಷ ಸಜೆ, ದಂಡ

ಕಾಸರಗೋಡು: 13ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯ ಎಂಟು ವರ್ಷ ಕಠಿಣ ಸಜೆ ಹಾಗೂ 21,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ.

ಕುತ್ತಿಕ್ಕೋಲ್ ವಳವಿಲ್ ವಳ್ಳಿವಳಪ್ಪಿಲ್ ಹೌಸ್‌ನ ಪಿ. ಬಾಬು (61) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಮತ್ತು ಒಂದು ತಿಂಗಳು ಹೆಚ್ಚುವರಿ ಸಜೆ  ಅನುಭವಿಸ ಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ.

2023 ಮಾರ್ಚ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಬೇಡಗಂ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು.  ಅಂದು ಬೇಡಗಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಎಂ. ಗಂಗಾಧರನ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ  ಆರೋಪಿಗೆ ಈ ಶಿಕ್ಷೆ ವಿಧಿಸಲಾಗಿದೆ.

RELATED NEWS

You cannot copy contents of this page