ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ  ಪೋಕ್ಸೋ ಪ್ರಕರಣದ  ಆರೋಪಿಗೆ ಹೊಸದುರ್ಗ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ನ ನ್ಯಾಯಾ ಧೀಶರಾದ ಸುರೇಶ್ ಪಿ.ಎಂ.   ೫೦ ವರ್ಷ ಸಜೆ ಹಾಗೂ 15,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.  ಹೊಸದುರ್ಗ ಕಂಡಕಡವು ಆವಿಯಿಲ್ ಬಿಸ್ಮಿಲ್ಲಾ ಮಂಜಿಲ್‌ನ ಹೈದರ್ ಅಲಿ ಎಂ.ಆರ್.(58) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 9 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಹೊಸದುರ್ಗ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಹೊಸದುರ್ಗ ಠಾಣೆಯ ಎಸ್‌ಐ ಆಗಿದ್ದ ಸುಭಾಷ್ ಬಾಬು ಕೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆ ಪ್ರಕರಣದಲ್ಲಿ ಆರೋಪಿಗೆ ಈ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್‌ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಗಂಗಾಧರನ್ ಎ. ನ್ಯಾಯಾಲಯದಲ್ಲಿ ವಾದಿಸಿದ್ದರು.

You cannot copy contents of this page