ಬಾಯಾರು: ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ ಸತತ 20ನೇ ಬಾರಿಗೆ ಶೇ.100 ಫಲಿತಾಂಶವನ್ನು ಸಾಧಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮೆರೆದಿದೆ.
ಒಟ್ಟು 76 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 97ಶೇ. ಅಂಕಗಳೊAದಿಗೆ ಕುಮಾರಿ ತನ್ವಿ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಉತ್ತಮ ಅಂಕಗಳೊAದಿಗೆ ಉತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದೆ.
