ಪ್ರಾಯಪೂರ್ತಿಯಾಗದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಜೀವಾವಧಿ ಸಜೆ; 50 ವರ್ಷ ಕಠಿಣ ಸಜೆ, 4 ಲಕ್ಷ ರೂ. ದಂಡ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಕ್ಷಿಪ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮು ರಮೇಶ್ ಚಂದ್ರಬಾನು ಅವರು ಜೀವಾವಧಿ ಸಜೆ, ಅದರ ಜತೆಗೆ 50 ವರ್ಷ ಕಠಿಣ ಸಜೆ ಹಾಗೂ ೪ ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆರೋಪಿ 16 ತಿಂಗಳು ಹೆಚ್ಚುವರಿ ಸಜೆ ಅನುಭವಿ ಸಬೇಕೆಂದು ತಿಳಿಸಲಾಗಿದೆ.

ಬಂಬ್ರಾಣ ಪೊಯ್ಯೆವಳಪ್‌ನ ಕಿರಣ್‌ರಾಜ್ ಶೆಟ್ಟಿ (26) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. 2018 ಅಕ್ಟೋಬರ್ ೮ರಂದು 13 ವರ್ಷ ಪ್ರಾಯದ ಪರಿಶಿಷ್ಟ ಜಾತಿ ವಿಭಾಗಕ್ಕೊಳಪಟ್ಟ ಬಾಲಕಿಯನ್ನು ಆರೋಪಿ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಜನವಾಸವಿಲ್ಲದ ಮನೆಗೆ ತಲುಪಿಸಿ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆನ್ನಲಾಗಿದೆ.  ದೂರು ಹಿಂತೆಗೆಯುವಂತೆ ಬಾಲಕಿಗೆ ಬೆದರಿಕೆಯೊಡ್ಡಿದ ಆರೋಪದಂತೆ ಆರೋಪಿಯ ಸಹೋದರನ ವಿರುದ್ಧವೂ ಕೇಸು ದಾಖಲಿಸಲಾಗಿದೆ.

ಕುಂಬಳೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ ಅಂದಿನ ಎಸ್‌ಎಂಎಸ್ ಡಿವೈಎಸ್ಪಿ ಕೆ. ಹರಿಶ್ಚಂದ್ರ ನಾಯ್ಕ್ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರ. ಪ್ರೋಸಿಕ್ಯೂಶನ್ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯ ಹಾಜರಾಗಿದ್ದರು.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page